Friday, August 7, 2026
spot_imgspot_img
spot_imgspot_img

ಬಂಟ್ವಾಳ: ಬಂಟರ ಸಂಘ ಕಲ್ಲಡ್ಕ ವಲಯದಿಂದ ಆಟಿ ಸಂಭ್ರಮ: ಆ.9ರಂದು ವೈವಿಧ್ಯಮಯ ಕಾರ್ಯಕ್ರಮ

- Advertisement -
- Advertisement -

ಬಂಟ್ವಾಳ: ಬಂಟರ ಸಂಘ ಕಲ್ಲಡ್ಕ ವಲಯದ ವತಿಯಿಂದ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸಹಯೋಗದಲ್ಲಿ “ಆಟಿಡೊಂಜಿ ಐತಾರದ ಗಮ್ಮತ್” ಕಾರ್ಯಕ್ರಮವು ಆಗಸ್ಟ್ 9ರ ಭಾನುವಾರ ಬೆಳಿಗ್ಗೆ 9.30 ಗಂಟೆಯಿಂದ ಕಲ್ಲಡ್ಕದ ಮರಾಠಿ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಕಲ್ಲಡ್ಕ ವಲಯದ ಮಕ್ಕಳಿಂದ ಸಾಂಸ್ಕೃತಿಕ ವೈಭವ ಪ್ರದರ್ಶನ ನಡೆಯಲಿದ್ದು, ಬೆಳಿಗ್ಗೆ 11.30ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ.

ಕಲ್ಲಡ್ಕ ವಲಯ ಬಂಟರ ಸಂಘದ ಅಧ್ಯಕ್ಷ ಗಣೇಶ್ ಶೆಟ್ಟಿ ಗೋಳ್ತಮಜಲು ಅಧ್ಯಕ್ಷತೆ ವಹಿಸಲಿದ್ದಾರೆ.ಈ ಸಂದರ್ಭದಲ್ಲಿ “ತುಳುನಾಡಿನ ಆಟಿ ಸಂಪ್ರದಾಯ” ಕುರಿತು ಜಾನಪದ ಸಂಸ್ಕೃತಿ ಚಿಂತಕ ನವನೀತ್ ಶೆಟ್ಟಿ ಕದ್ರಿ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಬಂಟರ ಸಂಘ ಬಂಟ್ವಾಳ ತಾಲೂಕು ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯದರ್ಶಿ ಸದಾನಂದ ಆಳ್ವ ಕಂಪ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕುಳ, ಮಹಿಳಾ ವಿಭಾಗದ ಅಧ್ಯಕ್ಷೆ ಸುಜಾತ ಪಿ. ರೈ, ಯುವ ವಿಭಾಗದ ಅಧ್ಯಕ್ಷ ಗೋಕುಲ್ ಭಂಡಾರಿ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅದೇ ವೇಳೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ 85%ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.ಕಲ್ಲಡ್ಕ ವಲಯದ ಎಲ್ಲಾ ಸ್ವಜಾತಿ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬಂಟರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

- Advertisement -

Related news

error: Content is protected !!