Sunday, August 9, 2026
spot_imgspot_img
spot_imgspot_img

ತುಮಕೂರು: ಲೋ ಬಿಪಿಯಿಂದ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು

- Advertisement -
- Advertisement -

ತುಮಕೂರು: ಲೋ ಬಿಪಿಯಿಂದ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಪ್ರಿಯಾಂಕಾ (14) ಮೃತ ಬಾಲಕಿ. ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಬಾಲಕಿ ಇದ್ದಳು. ಹಾಸ್ಟೆಲ್‌ನ ಶೌಚಾಲಯದಲ್ಲಿ ಕುಸಿದು ಬಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.

ಕಾರಗಾನಹಟ್ಟಿ ಗ್ರಾಮದ ನರಸಿಂಹ ಮೂರ್ತಿ ಹಾಗೂ ಶಾರದಮ್ಮ ದಂಪತಿಯ ಪುತ್ರಿ ಪ್ರಿಯಾಂಕಾ, ತ್ರಿಯಂಬಕೇಶ್ವರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಒಂದು ವಾರದಿಂದ ಅನಾರೋಗ್ಯ ಕಾರಣಕ್ಕೆ ಊರಿಗೆ ತೆರಳಿದ್ದಳು. ಬಳಿಕ ಆಗಸ್ಟ್ 7 ರಂದು ಮತ್ತೆ ಹಾಸ್ಟೆಲ್‌ಗೆ ವಾಪಸ್ ಆಗಿದ್ದಳು.ನಿನ್ನೆ ಬೆಳಗ್ಗೆ ಹಾಸ್ಟೆಲ್‌ನ ಶೌಚಾಲಯಕ್ಕೆ ತೆರಳಿದ್ದ ವೇಳೆ ಬಾಲಕಿ ಅಸ್ವಸ್ಥಗೊಂಡು, ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಳು. ತಕ್ಷಣ ಆಕೆಯನ್ನು ಹಾಸ್ಟೆಲ್‌ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಸ್ಪತ್ರೆಗೆ ಬಾಲಕಿಯನ್ನು ಕರೆತರುವ ಮುನ್ನವೇ ಸಾವನ್ನಪ್ಪಿದ್ದಾಳೆ.

ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ್ದ ಪಾವಗಡ ಗ್ರಾಮಾಂತರ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!