Monday, August 10, 2026
spot_imgspot_img
spot_imgspot_img

ಆರ್.ಜಿ ಕರ್ ರೇಪ್‌ & ಮರ್ಡರ್‌ ಕೇಸ್–ಮರು ತನಿಖೆಗೆ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ

- Advertisement -
- Advertisement -

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆರ್.ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2024ರಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಭಾನುವಾರ(ಆ. 9) ಮರು ತನಿಖೆಗೆ ಆದೇಶಿಸಿದ್ದಾರೆ.

ಈ ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು. ಸಂತ್ರಸ್ತೆಯ ತಾಯಿ ಹಾಗೂ ಹಾಲಿ ಬಿಜೆಪಿ ಶಾಸಕಿ ರತ್ನಾ ದೇಬನಾಥ್‌ ಅವರು ಮರು ತನಿಖೆಗೆ ಮನವಿ ಮಾಡಿದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಹಾಗೂ ತಜ್ಞರ ತಂಡದೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ Special Commission Act,1952 ರ ಅಡಿಯಲ್ಲಿ ಹೊಸ ತನಿಖೆ ನಡೆಸಲು ನಿರ್ಧರಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಂತ್ರಸ್ತೆಯ ಅಂತ್ಯಕ್ರಿಯೆ ವೇಳೆ ನಡೆದಿದೆ ಎನ್ನಲಾದ ಲೋಪಗಳ ಬಗ್ಗೆಯೂ ಪ್ರತ್ಯೇಕ ತನಿಖೆಗೆ ಮುಖ್ಯಮಂತ್ರಿ ಆದೇಶಿಸಿದ್ದು, ತಪ್ಪಿತಸ್ಥರು ಪತ್ತೆಯಾದರೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿರುವುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!