Wednesday, August 12, 2026
spot_imgspot_img
spot_imgspot_img

ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ – ನೂರಕ್ಕೂ ಅಧಿಕ ಬೈಕ್‌ಗಳು ಬೆಂಕಿಗಾಹುತಿ

- Advertisement -
- Advertisement -

ಬೆಂಗಳೂರು: ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿಯಾಗಿರುವ ಘಟನೆ ಕೆ.ಆರ್. ಪುರದ ಎನ್‌ಆರ್‌ಐ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್‌ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, 2 ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ.

ಎಲೆಕ್ಟ್ರಿಕ್ ಬೈಕ್ ಶೋರೂಂ ಒಂಬತ್ತು ಗಂಟೆಗೆ ಕ್ಲೋಸ್ ಆಗಿದೆ. ನಂತರ ಒಳಗೆ ಹೊಗೆ ಬರುತ್ತಿರುವುದನ್ನು ಸೆಕ್ಯುರಿಟಿ ಗಮನಿಸಿದ್ದಾರೆ. ಓಪನ್ ಮಾಡಿ ನೋಡುವಷ್ಟರಲ್ಲಿ ಶೋರೂಂ ಪೂರ್ತಿ ಬೆಂಕಿ ಆವರಿಸಿಕೊಂಡಿದೆ.

ಯಾವುದೇ ಪ್ರಾಣಹಾನಿಯಾಗಿಲ್ಲ. ಬದಲಾಗಿ ಶೋರೂಂನಲ್ಲಿದ್ದ ಬಹುತೇಕ ಎಲ್ಲಾ ಬೈಕ್‌ಗಳು ಕೂಡ ಸುಟ್ಟು ಭಸ್ಮವಾಗಿವೆ. ಬೆಂಕಿ ಅವಘಡದಲ್ಲಿ ಪಕ್ಕದಲ್ಲಿದ್ದ ಆಸ್ಪತ್ರೆಗೂ ಹಾನಿಯಾಗಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!