Wednesday, August 12, 2026
spot_imgspot_img
spot_imgspot_img

ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಪೊಲೀಸ್‌ ದಾಳಿ: ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ

- Advertisement -
- Advertisement -

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕೇಂದ್ರ ಅಪರಾಧಿ ವಿಭಾಗ (ಸಿಸಿಬಿ)ದ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್ ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ.ಜೈಲಿನಲ್ಲಿ ಪ್ರಭಾವಿ ಹಾಗೂ ಇತರ ಕೈದಿಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಅಪರಾಧಿ ವಿಭಾಗವು(ಸಿಸಿಬಿ) ನಡೆಸಿದ ಐದು ಗಂಟೆಗಳ ಸುದೀರ್ಘ ದಾಳಿ ನಡೆಸಿದೆ.

ಈ ವೇಳೆ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಜೈಲು ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.ಮಂಗಳವಾರ ಮಧ್ಯಾಹ್ನ ಸಿಸಿಬಿ ದಾಳಿ ನಡೆಸಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಅವರಿರುವ ಬ್ಯಾರಕ್ ನಿಂದ ಒಂದು ಆಂಡ್ರಾಯ್ಡ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆ‌ರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಸಿಸಿಬಿ ವತಿಯಿಂದ ಕಾರಾಗೃಹದಲ್ಲಿನ ಪ್ರಮುಖ ಕೈದಿಗಳು ಹಾಗೂ ಇತರ ಕೈದಿಗಳ ಮೇಲೆ ನಡೆಸಲಾದ 4-5 ಗಂಟೆಗಳ ಶೋಧ ಕಾರ್ಯಾಚರಣೆಯ ವೇಳೆ ಬೇರೆ ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

- Advertisement -

Related news

error: Content is protected !!