Wednesday, August 12, 2026
spot_imgspot_img
spot_imgspot_img

ಉಡುಪಿ ಜಿಲ್ಲೆ ಪ್ರವೇಶಕ್ಕೆ ನರಸಿಂಹ ಮಾಣಿಗೆ ನಿರ್ಬಂಧ

- Advertisement -
- Advertisement -

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ನರಸಿಂಹ ಮಾಣಿ (44) ಅವರ ಉಡುಪಿ ಜಿಲ್ಲೆ ಪ್ರವೇಶಕ್ಕೆ ಮೂರು ತಿಂಗಳ ಕಾಲ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಆ.13ರಿಂದ ನ.12ರವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.ಆದೇಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಆ.12ರ ಮಧ್ಯರಾತ್ರಿ 12 ಗಂಟೆಯೊಳಗೆ ಲಿಖಿತವಾಗಿ ಅಥವಾ [email protected] ಮೂಲಕ ಸಲ್ಲಿಸುವಂತೆ ಸೂಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಆಕ್ಷೇಪಣೆ ಸಲ್ಲಿಸದಿದ್ದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.

- Advertisement -

Related news

error: Content is protected !!