Thursday, August 13, 2026
spot_imgspot_img
spot_imgspot_img

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ

- Advertisement -
- Advertisement -

ಕಾರ್ಕಳ: ತಾಲೂಕಿನ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಅವರು ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ‘ಕಮರ್ಷಿಯಲ್ ಪೈಲಟ್ ಲೈಸೆನ್ಸ್’ ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯಲ್ಲಿ ಈ ಸಾಧನೆ ಮಾಡಿದ ಪ್ರಥಮ ಮಹಿಳೆ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.

ರಂಗನಪಲ್ಕೆ, ಕೌಡೂರಿನ ಅಶೋಕ್ ಜಾಕೋಬ್ ಸಲ್ಡಾನಾ ಮತ್ತು ಮರಿಯಾ ಗ್ರೆಟ್ಟಾ ಸಲ್ಡಾನಾ ದಂಪತಿಯ ಪುತ್ರಿಯಾಗಿರುವ ಶೈನಿ, ತಮ್ಮ ಶಾಲಾ ಹಾಗೂ ಪದವಿಪೂರ್ವ ಶಿಕ್ಷಣವನ್ನು ಕಾರ್ಕಳದ ಕ್ರೈಸ್ಟ್ ಕಿಂಗ್ ಎಜ್ಯುಕೇಷನಲ್ ಇನ್‌ಸ್ಟಿಟ್ಯೂಷನ್‌ನಲ್ಲಿ ಪೂರ್ಣಗೊಳಿಸಿದರು.

ಪೈಲಟ್ ಆಗಬೇಕೆಂಬ ತಮ್ಮ ಬಾಲ್ಯದ ಕನಸನ್ನು ನನಸುಮಾಡಿಕೊಳ್ಳುವ ಉದ್ದೇಶದಿಂದ ಶೈನಿ, ಬೆಂಗಳೂರಿನಲ್ಲಿ ನಡೆದ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿ ಪ್ರವೇಶ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿ ತೇರ್ಗಡೆ ಹೊಂದಿದರು. ಬಳಿಕ, ಉತ್ತರ ಪ್ರದೇಶದ ಫುರ್ಸತ್‌ಗಂಜ್‌ನಲ್ಲಿರುವ ಐಜಿಆರ್‌ಯುಎ ಸಂಸ್ಥೆಯಲ್ಲಿ 2023ರ ಆಗಸ್ಟ್‌ನಿಂದ ವೃತ್ತಿಪರ ಪೈಲಟ್ ತರಬೇತಿ ಪಡೆದಿದ್ದಾರೆ.

ಶೈನಿ ಅವರು ತರಬೇತಿಯ ವಿವಿಧ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದಿದ್ದಾರೆ. ಈ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ.
ಶೈನಿಯವರ ಈ ಸಾಧನೆಯು ಎಲ್ಲರ ಗಮನ ಸೆಳೆದಿದ್ದು, ಅವರ ಈ ಐತಿಹಾಸಿಕ ಸಾಧನೆಗೆ ಕುಟುಂಬ ವರ್ಗದವರು, ಸ್ನೇಹಿತರು ಹಾಗೂ ಕಾರ್ಕಳದ ಸ್ಥಳೀಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement -

Related news

error: Content is protected !!