- Advertisement -
- Advertisement -



ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್) ಅವಿರೋಧವಾಗಿ ಆಯ್ಕೆಯಾದರು.
ವಿಧಾನಸಭಾ ಅಧಿವೇಶನದ 2ನೇ ದಿನವಾದ ಶುಕ್ರವಾರ ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಿತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪೀಕರ್ ಸ್ಥಾನಕ್ಕೆ ಜಿ.ಎಸ್.ಪಾಟೀಲರ ಹೆಸರನ್ನು ಸೂಚಿಸಿದರು.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅನುಮೋದಿಸಿದರು. ಸ್ಪೀಕರ್ ಸ್ಥಾನಕ್ಕೆ ಜಿ.ಎಸ್.ಪಾಟೀಲ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಸರ್ವಾನುಮತದಿಂದ ಆಯ್ಕೆಯಾದರು.
ಹಂಗಾಮಿ ಸ್ಪೀಕರ್ ಟಿ.ಬಿ.ಜಯಚಂದ್ರ ಅವರ ಆದೇಶ ಅನುಸಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸ್ಪೀಕರ್ ಪೀಠದ ಬಳಿಗೆ ಜಿ.ಎಸ್.ಪಾಟೀಲ್ ಅವರನ್ನು ಕರೆತಂದರು. ಬಳಿಕ ಶುಭಾಶಯ ಕೋರಲಾಯಿತು ಎಂದು ತಿಳಿದುಬಂದಿದೆ.
- Advertisement -








