Saturday, August 15, 2026
spot_imgspot_img
spot_imgspot_img

ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

- Advertisement -
- Advertisement -

ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಯೋಧ ಕ್ಯಾಪ್ಟನ್ ಧನಂಜಯ ನಾಯ್ತೊಟ್ಟು ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿ, ಮಾಜಿ ಅಧ್ಯಕ್ಷ ರವಿಪ್ರಕಾಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಾಥ ವಿಟ್ಲ ಉಪಸ್ಥಿತರಿದ್ದರು.

ಎಸ್.ಡಿ.ಎಂ.ಸಿ ಅಧ್ಯಕ್ಷರುಗಳಾದ ಪ್ರವೀಣ ಮತ್ತು ರವಿಶಂಕರ್ ಶಾಸ್ತ್ರಿ ಹಾಗೂ ಸದಸ್ಯರು, ಮುಖ್ಯ ಶಿಕ್ಷಕಿಯರಾದ ಫೆಲ್ಸಿಟಾ ಇವಾ ಗಲ್ಬಾವೊ ಮತ್ತು ವಾರಿಜ ಬಿ, ಸಹಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!