Sunday, August 16, 2026
spot_imgspot_img
spot_imgspot_img

ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಪತಿ ಆಶಿಶ್‌ ಬ್ಯಾನರ್ಜಿ ಅವರು (ಇಂದು) ಭಾನುವಾರ (ಆ.16) ಬೆಳಿಗ್ಗೆ ಬೀರ್‌ಭೂಮ್ ಜಿಲ್ಲೆಯ ಟಿಎಂಸಿ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಮಪುರಹಾಟ್‌ನಲ್ಲಿರುವ ಅವರ ನಿವಾಸದ ಬಳಿಯ ಪಕ್ಷದ ಕಚೇರಿಯಿಂದ ಆತ್ಮಹತ್ಯೆ ಟಿಪ್ಪಣಿ ಎಂದು ಶಂಕಿಸಲಾದ ಪತ್ರವೊಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಅವರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ಪೊಲೀಸರು ವಿವರಿಸಿದ್ದಾರೆ..

ಟಿಎಂಸಿಯ ಹಿರಿಯ ನಾಯಕರಾಗಿದ್ದ ಬ್ಯಾನರ್ಜಿ ಅವರು 2001 ರಿಂದ 2026ರವರೆಗೆ ಸತತವಾಗಿ ರಾಮಪುರಹಾಟ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅವರು ವಿಧಾನಸಭೆಯ ಉಪ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದಲ್ಲದೆ, ಮಮತಾ ಬ್ಯಾನರ್ಜಿ ಅವರ ಸರ್ಕಾರದಲ್ಲಿ ಶಾಲಾ ಶಿಕ್ಷಣ ಮತ್ತು ಕೃಷಿ ಸೇರಿದಂತೆ ಹಲವು ಖಾತೆಗಳ ಸಚಿವರಾಗಿದ್ದರು.

2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಧ್ರುವ ಸಾಹಾ ವಿರುದ್ಧ 24 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನುಭವಿಸಿದ್ದರು. ನಂತರ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಲಿಲ್ಲ.

ಆಶಿಶ್ ಬ್ಯಾನರ್ಜಿ ಅವರ ಸಾವಿಗೆ ಕಾರಣವೇನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಈ ಆತ್ಮಹತ್ಯೆ ಟಿಪ್ಪಣಿಯಲ್ಲೇನಿದೆ ಎಂಬುದನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!