Wednesday, August 19, 2026
spot_imgspot_img
spot_imgspot_img

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ

- Advertisement -
- Advertisement -

ವಿಟ್ಲ: ಬಸ್ಸಿನಲ್ಲಿ ಪರಿಚಿತನಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಟ್ಲ ಪಡ್ನೂರು ಗ್ರಾಮದ ನಿವಾಸಿಯಾದ ಆರೋಪಿ ಈ ಹಿಂದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ಮಾಡಿದ್ದು, ಪ್ರಸ್ತುತ ಕೃಷಿ ಕೆಲಸದಲ್ಲಿ ತೊಡಗಿದ್ದಾನೆ ಎಂದು ತಿಳಿದುಬಂದಿದೆ.

ಬಸ್ಸಿನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಲೈಂಗಿಕ ಕೃತ್ಯ ಎಸಗಿದ ಆರೋಪದ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿಟ್ಲ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!