- Advertisement -
- Advertisement -



ಕೆಲಿಂಜ: ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ಇದರ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ‘ಬಂಗಾರ್ದ ಪರ್ಬ’ದ ಆಮಂತ್ರಣ ಪತ್ರಿಕೆಯ ಮುಖಪುಟ ಬಿಡುಗಡೆ ಕಾರ್ಯಕ್ರಮ ಆಗಸ್ಟ್ 17ರಂದು ಶ್ರೀ ಉಳ್ಳಾಲ್ತಿ ಕ್ಷೇತ್ರ, ಕೆಲಿಂಜದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿ, ಉತ್ಸವ ಸಮಿತಿ ಹಾಗೂ ಮಹಿಳಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ‘ಬಂಗಾರ್ದ ಪರ್ಬ’ವು ಸೆಪ್ಟೆಂಬರ್ 14, 15 ಹಾಗೂ 16ರಂದು ಮೂರು ದಿನಗಳ ಕಾಲ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -








