- Advertisement -
- Advertisement -


ವಿಟ್ಲ: ಪಿಕಪ್ ಹಾಗೂ ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿಲ ಮುರುವ ತಿರುವಿನಲ್ಲಿ ನಡೆದಿದೆ.ಅಪಘಾತದಲ್ಲಿ ಆಕ್ಟಿವಾ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.


ಗಾಯಗೊಂಡವರನ್ನು ಮಾಣಿಲ ನಿವಾಸಿಗಳಾದ ಮನ್ವಿತಾ ಹಾಗೂ ಕಾವ್ಯಶ್ರೀ ಎಂದು ಗುರುತಿಸಲಾಗಿದೆ.ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ.
- Advertisement -








