- Advertisement -
- Advertisement -



ಹಾವೇರಿ: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು , ಮೂವರು ಗಂಭೀರ ಗಾಯಗೊಂಡ ಘಟನೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಸಂಭವಿಸಿದೆ.
ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ಧಾರ್ಥ(27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ.
ಸೌಂದರ್ಯ(26), ಸಿಂಧೂ(24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ದಾರೆ . ಗಾಯಾಳುಗಳನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ವೇಳೆ ಚಳಗೇರಿ ಟೋಲ್ ಗೇಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.
ಅಪಘಾತದ ಮಾಹಿತಿ ತಿಳಿದು ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -








