Friday, August 21, 2026
spot_imgspot_img
spot_imgspot_img

ಬಿಜೆಪಿ ವಿರುದ್ಧದ ಜಾಹೀರಾತು ಪ್ರಕರಣ: ಸಿದ್ದರಾಮಯ್ಯ, ಡಿಕೆಶಿ ಅರ್ಜಿಗಳ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು : ಹಿಂದಿನ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಅಂದಿನ ರಾಜ್ಯ ಸರಕಾರದ ವಿರುದ್ಧ ಸರಣಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿ ಜಾಹೀರಾತು ನೀಡಿದ್ದ ಸಂಬಂಧ ದಾಖಲಾಗಿರುವ ಮಾನನಷ್ಟ ಪ್ರಕರಣ ರದ್ದುಕೋರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

ಆಕ್ಷೇಪಾರ್ಹ ಜಾಹೀರಾತು ಪ್ರಕಟಿಸುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ ಸಲ್ಲಿಸಿದ್ದ ಖಾಸಗಿ ದೂರಿನ ಅನ್ವಯ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಡಿ.ಕೆ. ಶಿವಕುಮಾ‌ರ್ ಹಾಗೂ ಹೈಕೋರ್ಟ್‌ಗೆ ಪ್ರತ್ಯೇಕ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗಳ ಕುರಿತು ಗುರುವಾರ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತು.ಇದಕ್ಕೂ ಮುನ್ನ ದೂರುದಾರರ ಪರ ವಕೀಲ ಎಂ.ವಿನೋದ್ ಕುಮಾರ್ ವಾದ ಮಂಡಿಸಿದರೆ, ಅರ್ಜಿದಾರರ ಪರ ಹಿರಿಯ ವಕೀಲ ಕೆ. ಶಶಿಕಿರಣ್ ಶೆಟ್ಟಿ ವಾದಿಸಿದರು.

- Advertisement -

Related news

error: Content is protected !!