Friday, August 21, 2026
spot_imgspot_img
spot_imgspot_img

ಚಿತ್ರದುರ್ಗ: ಬೆಂಗ್ಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್‌ ಪಲ್ಟಿ – ಇಬ್ಬರು ದುರ್ಮರಣ, 20 ಮಂದಿಗೆ ಗಾಯ

- Advertisement -
- Advertisement -

ಚಿತ್ರದುರ್ಗ: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ.

ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯ ಎಡ ಭಾಗದ ಟ್ರೆಂಚ್‌ಗೆ ಬಸ್‌ ಬಿದ್ದಿದ್ದು, ಬಸ್‌ನ ಮುಂಭಾಗ ಜಖಂ ಆಗಿದೆ. ಈ ಅಪಘಾತದಲ್ಲಿ 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಲ್ಯಾಂಡ್ ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿತ್ತು. ಬಸ್‌ನಲ್ಲಿ 53 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರೆಲ್ಲರೂ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಿಕೆರೆ ಬಳಿಕ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಕೇರಳ ಮೂಲದ ವಿದ್ಯಾರ್ಥಿನಿಯರು ಗೋವಾ ಪ್ರವಾಸಕ್ಕೆ ತೆರಳಿ, ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್‌ನ್ನು ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!