


ಸುಳ್ಯ: ಪೋಕ್ಸ್ ಪ್ರಕರಣದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 5 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿ ತೀರ್ಪು ನೀಡಿದೆ.
ಕಡಬ ಕುದ್ಮಾರು ನಿವಾಸಿಯಾದ ಅಬ್ದುಲ್ಲಾ(64) ಶಿಕ್ಷೆಗೆ ಒಳಗಾದ ವ್ಯಕ್ತಿ.
ಬೆಳ್ಳಾರೆ ಪೊಲೀಸ್ ಠಾಣಾ ಅ. ಕ್ರ : 12/2020, ಕಲಂ : 354(A1),506 IPC ಮತ್ತು ಕಲಂ : 8 POCSO ACT -2012 ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿ ಅಬ್ದುಲ್ಲಾಗೆ ಮಂಗಳೂರು ಮಾನ್ಯ 7 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ , ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿರವರು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ.
ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ವಾಸವನ್ನು ಮತ್ತು 35,000 ದಂಡವನ್ನು ವಿಧಿಸಿದ್ದು ದಂಡ ಪಾವತಿಸಲು ವಿಫಲವಾದರೆ 6 ತಿಂಗಳ ಸಾಧಾ ಕಾರಾಗೃಹ ಶಿಕ್ಷೆ ವಿಧಿಸಿ ಅದೇಶ ಹೊರಡಿಸಿದೆ.
ಪ್ರಕರಣದ ಅಂದಿನ ತನಿಖಾಧಿಕಾರಿಗಳು ಹಾಗೂ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಸರ್ಕಾರ ಅಭಿಯೋಜಕರಾದ ಪುಷ್ಪರಾಜ್ ರವರು ಸಮರ್ಥವಾಗಿ ವಾದಮಂಡಿಸಿದರು.








