Friday, August 21, 2026
spot_imgspot_img
spot_imgspot_img

ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ದಾಂದಲೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಆಕ್ರೋಶ

- Advertisement -
- Advertisement -

ಪುತ್ತೂರು: ಪುತ್ತೂರಿನಲ್ಲಿ ಇಂದು ನಡೆದ ಗಲಭೆ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಆರೋಪಿಸಿದ್ದಾರೆ.

ಪುತ್ತೂರಿನಲ್ಲಿ ನಡೆದ ಘಟನೆ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಮುಸ್ಲಿಂ ಮತಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದರು. ಪೊಲೀಸರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲೇ ಅವರ ಮೇಲೆ ಹಲ್ಲೆ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಹೇಳಿದರು.

ಹಿಂದೆಯೂ ಇಂತಹ ಘಟನೆಗಳು ನಡೆದಾಗ ಹಿಂದೂ ಸಮಾಜ ಪ್ರತಿಕ್ರಿಯಿಸಿದೆ. ಮುಂದೆಯೂ ಕಾನೂನುಬದ್ಧವಾಗಿ ಉತ್ತರ ನೀಡಲಿದೆ. ತಪ್ಪಿತಸ್ಥರ ವಿರುದ್ಧ ಯಾವುದೇ ರಾಜಕೀಯ ಒತ್ತಡವಿಲ್ಲದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಯಾನಂದ ಶೆಟ್ಟಿ ಆಗ್ರಹಿಸಿದರು.ಪುರುಷರಕಟ್ಟೆಯಲ್ಲಿ ನಡೆದ ಹಿಂದಿನ ಘಟನೆಯನ್ನು ಗಂಭೀರವಾಗಿ ಪರಿಗಣಿಸದಿರುವುದರಿಂದ ಇಂದಿನ ಘಟನೆ ಮರುಕಳಿಸಿದೆ ಎಂದು ಆರೋಪಿಸಿದ ಅವರು, ಪುತ್ತೂರಿನ ಶಾಸಕರ ಮುಸ್ಲಿಂ ಓಲೈಕೆ ರಾಜಕಾರಣವೇ ಇಂತಹ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಟೀಕಿಸಿದರು.

ಮಹಾಲಿಂಗೇಶ್ವರನ ಮಣ್ಣಿನಲ್ಲಿ ಇಂತಹ ದೌರ್ಜನ್ಯ ಹೆಚ್ಚು ಕಾಲ ನಡೆಯಲು ಸಾಧ್ಯವಿಲ್ಲ. ರೌಡಿಸಂಗೆ ಮುಂದಾದರೆ ಹಿಂದೂ ಸಮಾಜವೂ ಎಲ್ಲದಕ್ಕೂ ಸಿದ್ಧವಿದೆ ಎಂದು ಎಚ್ಚರಿಸಿದ ಅವರು, ಪುತ್ತೂರು ಬಿಜೆಪಿ ಈ ವಿಚಾರವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದರು.ಇದೇ ವೇಳೆ, ಇಂದು ನಡೆದ ಗಲಭೆಗೆ ಕಾರಣರಾದವರನ್ನು ಗುರುತಿಸಿ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಸೇರಿದಂತೆ ಘಟನೆಗೆ ಸಂಬಂಧಿಸಿದ ಎಲ್ಲ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

- Advertisement -

Related news

error: Content is protected !!