Saturday, August 22, 2026
spot_imgspot_img
spot_imgspot_img

ಜಮೀನು ನೋಂದಣಿ ಮಾಡದೆ ₹1 ಕೋಟಿ 61,250 ಸಾವಿರ ರೂ. ಗಳ ವಂಚನೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ

- Advertisement -
- Advertisement -

ಬೆಳ್ತಂಗಡಿ: ಜಮೀನು ಖರೀದಿಸುವ ಸಂಬಂಧ ₹90 ಲಕ್ಷಕ್ಕೆ ಕರಾರು ಮಾಡಿಕೊಂಡು, ಬಳಿಕ ₹1,00,61,250 ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ಜಮೀನು ನೋಂದಣಿ ಮಾಡದೆ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಕೊಟ್ಟಾರ ಚೌಕಿ ನಿವಾಸಿ ಶಶಿಧರ ಅಚ್ಯುತ ತೋಟಂತಿಲ (61) ಅವರು ನೀಡಿದ ದೂರಿನಂತೆ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿರುವ ರಂಜನ್ ರಾವ್ ಎರ್ಡೂರು ಅವರ ಮಾಲಕತ್ವದ ಜಮೀನು ಖರೀದಿಸುವ ಸಂಬಂಧ ಸೋಮನಾಥ ನಾಯಕ್ ಅವರ ಮುಂದಾಳತ್ವದಲ್ಲಿ 2025ರ ಅಕ್ಟೋಬರ್ 4ರಂದು ₹90 ಲಕ್ಷಕ್ಕೆ ಕರಾರು ಮಾಡಿಕೊಳ್ಳಲಾಗಿತ್ತು.ಜಮೀನು ಖರೀದಿ ಮೊತ್ತವೆಂದು ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹1,00,61,250 ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಆದರೆ ಕರಾರಿನಲ್ಲಿ ತಿಳಿಸಿರುವಷ್ಟು ಜಮೀನನ್ನು ದೂರುದಾರರ ಹೆಸರಿಗೆ ನೋಂದಣಿ ಮಾಡಿಸದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 91/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 318(4) ಜೊತೆಗೆ 3(5)ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

- Advertisement -

Related news

error: Content is protected !!