- Advertisement -
- Advertisement -


ಮಂಗಳೂರಿನಲ್ಲಿ ಬಂಧಿಸಲಾದ 21 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳದ ಬಿಎಸ್ಎಫ್ಗೆ ಹಸ್ತಾಂತರಿಸಲು 30 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆಗಸ್ಟ್ 26ರೊಳಗೆ ಅವರನ್ನು ಬಿಎಸ್ಎಫ್ಗೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.


ಬಂಧಿತರನ್ನು ಮಂಗಳೂರಿನಿಂದ ಬಸ್ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಗುವುದು. ಅಲ್ಲಿಂದ ಆಗಸ್ಟ್ 23ರಂದು ರೈಲಿನಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾಗೆ ತೆರಳಿ, ಬಂಧಿತ ಬಾಂಗ್ಲಾದೇಶಿ ಪ್ರಜೆಗಳನ್ನು ಬಿಎಸ್ಎಫ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು. ಬಳಿಕ ಬಿಎಸ್ಎಫ್ ವತಿಯಿಂದ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

- Advertisement -








