- Advertisement -
- Advertisement -


ಪುತ್ತೂರು: ನಸುಕಿನ ಜಾವ ಪಿಕಪ್ ಜೀಪಿನಲ್ಲಿ ಮೂರು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಚಿಕ್ಕ ಮುಡ್ನೂರು ಜಿಡೆಕಲ್ಲಿನಲ್ಲಿ ನಡೆದಿದೆ.



ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ಲಭಿಸಿದ್ದು, ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಪಿಕಪ್ ನಲ್ಲಿ ಸಾಗಿಸಲಾಗುತ್ತಿದ್ದ ಮೂರು ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
- Advertisement -








