ಶೌರ್ಯ ವಿಪತ್ತು ನಿರ್ವಹಣಾ ಘಟಕ ವಿಟ್ಲ ಹಾಗೂ ಆಳಿಕೆಯ ಸದಸ್ಯರಿಂದ ಶ್ರಮದಾನ




ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲದಲ್ಲಿ ವೈದ್ಯಾಧಿಕಾರಿ ಡಾ. ಶಮನ್ ಜೆ ಅವರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಆದಿತ್ಯವಾರ(ಆ.23)ದಂದು ಸಮುದಾಯ ಆರೋಗ್ಯ ಕೇಂದ್ರ, ಸಿಬ್ಬಂದಿಯವರ ವಸತಿಗೃಹ, ಎಂಡೋ ಪಾಲನ ಕೇಂದ್ರ ಹಾಗೂ ಸಂಪೂರ್ಣ ವ್ಯಾಪ್ತಿಯಲ್ಲಿ ಹುಲ್ಲು ತೆಗೆದು ಸ್ವಚ್ಛತೆಯನ್ನು ಮಾಡಲಾಯಿತು.

ಶೌರ್ಯ ವಿಪತ್ತು ನಿರ್ವಹಣಾ ಘಟಕ ವಿಟ್ಲ ಹಾಗೂ ಆಳಿಕೆಯ ಸದಸ್ಯರು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಮನ್ ಜೆ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಮತಿ ಕುಸುಮ, ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ಶ್ರೀಮತಿ ಇಂದಿರಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪುಷ್ಪಾವತಿ, ಶ್ರೀಮತಿ ಗೀತಾವತಿ, ಶ್ರೀಮತಿ ಜ್ಯೋತಿ ಹಾಗೂ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಶೋಭಾ, ಶ್ರೀಮತಿ ಕೋಮಲಾಕ್ಷಿ, ಶ್ರೀಮತಿ ವಿಮಲಾ ಅವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.








