- Advertisement -
- Advertisement -




ಬ್ರಹ್ಮಾವರ: ಮಗನೊಬ್ಬ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆಗೈದ ಪ್ರಕರಣ ಬ್ರಹ್ಮಾವರದ ಗಾಂಧಿನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಕೊಲೆಗೀಡಾದ ದಂಪತಿ. ಕೊಲೆ ಆರೋಪಿ ಮಗ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೆಹಬೂಬ್ ಅಲಿ ಲಾರಿ ಚಾಲಕರಾಗಿ ದುಡಿಯುತ್ತಿದ್ದು, ಮಗ ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣಕ್ಕಾಗಿ ತಂದೆ-ತಾಯಿಯೊಂದಿಗೆ ಜಗಳವಾಡಿ ಸುತ್ತಿಗೆಯಿಂದ ಬಡಿದು ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊಲೆ ಮಾಡಿದ ಬಳಿಕ ಆರೋಪಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಹತ್ಯೆಗೆ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ ಎಂದು ವರದಿಯಿಂದ ತಿಳಿದುಬಂದಿದೆ.
- Advertisement -








