Monday, August 24, 2026
spot_imgspot_img
spot_imgspot_img

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ; ಬಲವಂತದ ಅಂಗಡಿ ಬಂದ್‌ಗೆ ಅವಕಾಶವಿಲ್ಲ

- Advertisement -
- Advertisement -

ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತಾ ಭಾವನೆ ಹೆಚ್ಚಿಸುವ ನಿಟ್ಟಿನಲ್ಲಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಪೊಲೀಸ್ ಪಥಸಂಚಲನ ನಡೆಸಲಾಯಿತು.

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿಗಳು ಸ್ವಾಭಾವಿಕವಾಗಿ ಮುಚ್ಚಿರುವ ಸಾಧ್ಯತೆಯಿದ್ದು, ಇದರ ಹೊರತಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸುವುದಕ್ಕೆ ಅವಕಾಶ ನೀಡುವುದಿಲ್ಲ. ಈ ನಿಟ್ಟಿನಲ್ಲಿ ಅಗತ್ಯ ಪೊಲೀಸ್ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ ಪೊಲೀಸರು ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವಗಳನ್ನು ಪರಿಗಣಿಸದೆ ಪೊಲೀಸರು ನೋಟಿಸ್ ಸೇರಿದಂತೆ ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ಕುರಿತು ಯಾರಿಗಾದರೂ ಯಾವುದೇ ಅನುಮಾನ ಅಥವಾ ಚರ್ಚೆಯ ಅಗತ್ಯವಿದ್ದಲ್ಲಿ ಪೊಲೀಸರೊಂದಿಗೆ ಮುಕ್ತವಾಗಿ ಚರ್ಚಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

- Advertisement -

Related news

error: Content is protected !!