- Advertisement -
- Advertisement -

ಉಪ್ಪಿನಂಗಡಿ: ಸುಮಾರು ಆರು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ರಾಜಸ್ಥಾನದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ. 121/2019ರಲ್ಲಿ ದಾಖಲಾಗಿದ್ದ ಐಪಿಸಿ ಕಲಂ 457 ಹಾಗೂ 380ರ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರಾಜಸ್ಥಾನದ ಬೂಂದಿ ಜಿಲ್ಲೆಯ ಜಮೀಲ್ ಚಾಚಾ ಎಂಬಾತನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಆ.24ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್-331 ಗಜೇಂದ್ರ ಹಾಗೂ ಪೊಲೀಸ್ ಕಾನ್‌ಸ್ಟೆಬಲ್-2335 ರಾಮನಗೌಡ ಅವರು ರಾಜಸ್ಥಾನಕ್ಕೆ ತೆರಳಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -







