- Advertisement -
- Advertisement -



ಪುತ್ತೂರು: ಸಾಮಾಜಿಕ ಜಾಲತಾಣ ವಾಟ್ಸಾಪ್‌ನಲ್ಲಿ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ ಆ.26 ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವಂತಹ ಸುಳ್ಳು ಸುದ್ದಿಯನ್ನು ಹರಡಿರುವುದು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಖಾತೆದಾರ ಮಂಜುನಾಥ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2026, ಕಲಂ: 353(2) BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Advertisement -








