Tuesday, August 25, 2026
spot_imgspot_img
spot_imgspot_img

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಅದ್ದು ಪಡೀಲ್ ವಿರುದ್ಧ ಪೋಕ್ಸೋ ಪ್ರಕರಣ

- Advertisement -
- Advertisement -

ಪುತ್ತೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ತಲುಪಿಸುವುದಾಗಿ ನಂಬಿಸಿ ದ್ವಿಚಕ್ರ ವಾಹನದಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅದ್ದು ಪಡೀಲ್ ಎಂಬಾತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಆಗಸ್ಟ್ 23ರಂದು ರಾತ್ರಿ ಘಟನೆ ನಡೆದಿದ್ದು, ಕಾರ್ಯಕ್ರಮ ಮುಗಿದ ಬಳಿಕ ಬಾಲಕಿಯನ್ನು ಮನೆಗೆ ಬಿಡುವುದಾಗಿ ಆರೋಪಿ ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ದಿದ್ದಾನೆ ಎನ್ನಲಾಗಿದೆ. ದಾರಿ ಮಧ್ಯೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ. 46/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 75 ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!