- Advertisement -
- Advertisement -

ಬೆಳ್ತಂಗಡಿ: ಸುಮಾರು 13 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಅವರ ನಿವಾಸಕ್ಕೆ ಆರ್ಎಸ್ಎಸ್ನ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಬುಧವಾರ ದಿಢೀರ್ ಭೇಟಿ ನೀಡಿದರು.
ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಅವರ ಮನೆಗೆ ತೆರಳಿದ ಡಾ. ಪ್ರಭಾಕರ ಭಟ್ ಅವರು ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಪ್ರಕರಣ ನಡೆದು ಹಲವು ವರ್ಷಗಳಾದರೂ ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟದ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು ಎನ್ನಲಾಗಿದೆ.
ಭೇಟಿಯ ವೇಳೆ ಉದ್ಯಮಿ ಸದಾನಂದ ನಾವರ, ಪುರಂದರ, ಉಜಿರೆಯ ಮೋಹನ್ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
- Advertisement -








