Friday, August 28, 2026
spot_imgspot_img
spot_imgspot_img

ಕೊಪ್ಪಳ: ನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು

- Advertisement -
- Advertisement -

ಕೊಪ್ಪಳ: ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ಸಂಭವಿಸಿದೆ. ನರಗುಂದ ಮೂಲದ ಮೂವರು ಯುವಕರು ನರಗುಂದದಿಂದ ಕೊಪ್ಪಳದತ್ತ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.

ಅಪಘಾತದ ರಭಸಕ್ಕೆ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಾಬೂಸಾಬ್ ಬುಡನ್ ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!