



ದಿನಾಂಕ 31.08.2026 ರಂದು ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲು ಅನುಮತಿ ಕೋರಿ ಒಂದು ಸಂಘಟನೆಯು 27.08.2026 ರಂದು ಬೆಳಿಗ್ಗೆ ಅರ್ಜಿ ಸಲ್ಲಿಸಿದೆ. ಆದರೆ ಅರ್ಜಿಯಲ್ಲಿ ತಿಳಿಸಿರುವ ಪ್ರತಿಭಟನಾ ಸ್ಥಳವು ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ ಸೂಕ್ತ ಸ್ಥಳವನ್ನು ಗುರುತಿಸಿ ಮರು ಅರ್ಜಿ ಸಲ್ಲಿಸುವಂತೆ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಮಾರ್ಗಸೂಚಿಯ ಪ್ರತಿಯನ್ನು ಅರ್ಜಿದಾರರಿಗೆ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ದಿನಾಂಕ 31.08.2026 ರಂದು ಪುತ್ತೂರಿನಲ್ಲಿ ಇನ್ನೊಂದು ಸಂಘಟನೆ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಸಂಘಟನೆಯು ಇದುವರೆಗೆ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಸಿಲ್ಲ. ಅನುಮತಿಗಾಗಿ ಅರ್ಜಿ ಸಲ್ಲಿಸಿದಲ್ಲಿ ಬೇರೊಂದು ದಿನಾಂಕವನ್ನು ನಿಗದಿಪಡಿಸಿ ಅನುಮತಿ ಪಡೆಯಲು ಸೂಚಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರು ಪ್ರತಿಭಟನೆ ಸೇರಿದಂತೆ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ, ಕಾರ್ಯಕ್ರಮದ ಆಯೋಜಕರು ಸಂಬಂಧಿಸಿದ ಇಲಾಖೆಯಿಂದ ಅಗತ್ಯ ಅನುಮತಿ ಪಡೆದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಪೊಲೀಸರು ವಿನಂತಿಸಿದ್ದಾರೆ.







