Thursday, August 27, 2026
spot_imgspot_img
spot_imgspot_img

ಪುತ್ತೂರು ಗಲಾಟೆ ಪ್ರಕರಣ: ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮಕ್ಕೆ ಹೈಕೋರ್ಟ್ ತಡೆ

- Advertisement -
- Advertisement -


ಪುತ್ತೂರು: ಧಾರ್ಮಿಕ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಡಿ ಬಂದ್‌ಗೆ ಕರೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಮುಖಂಡ ದಿನೇಶ್ ಪಂಜಿಗ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.


ಪುತ್ತೂರು ನಗರದ ದರ್ಬೆ ಎಂಬಲ್ಲಿನ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿ, ‘ದಿನೇಶ್ ಪಂಜಿಗ’ ಹೆಸರಿನ ವಾಟ್ಸ್‌ಆ್ಯಪ್ ಖಾತೆಯ ಮೂಲಕ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವಂತಹ ಸಂದೇಶವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಬಂದ್‌ಗೆ ಕರೆ ನೀಡಿ ಜನರು ಅಕ್ರಮ ಕೂಟ ಸೇರಿ ಕಾನೂನುಬಾಹಿರ ಕೃತ್ಯ ಎಸಗಲು ಪ್ರಚೋದನೆ ನೀಡಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು.


ಈ ಹಿನ್ನೆಲೆಯಲ್ಲಿ ದಿನೇಶ್ ಪಂಜಿಗ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 100/2026ರಂತೆ BNS ಕಲಂ 353(2), 57 ಹಾಗೂ 189ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಪಂಜಿಗ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ ಎಂದು ತಿಳಿದುಬಂದಿದೆ.


ದಿನೇಶ್ ಪಂಜಿಗ ಪರವಾಗಿ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

- Advertisement -

Related news

error: Content is protected !!