- Advertisement -
- Advertisement -




ಕಡಬ: ಮನೆಯಲ್ಲಿ ಮರದ ಬಾಕ್ಸ್ನಲ್ಲಿಟ್ಟಿದ್ದ ನಗದು ಕಳ್ಳತನವಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ಗ್ರಾಮದ ಅಡ್ಡಗದ್ದೆ ನಿವಾಸಿ ತಮನ್ನಾ ಜಬೀನ್(43) ಎಂಬವರು ತಮ್ಮ ಗಂಡ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರೊಂದಿಗೆ ವಾಸವಾಗಿದ್ದು, ಅವರು ತಮ್ಮ ರೂಮಿನಲ್ಲಿಟ್ಟಿದ್ದ ಮರದ ಬಾಕ್ಸ್ನಲ್ಲಿ ಹಣ ಸಂಗ್ರಹಿಸಿಟ್ಟಿದ್ದರು.
ಆ.18 ರಂದು ಕಾರ್ಯಕ್ರಮವೊಂದರ ನಿಮಿತ್ತ ತಮನ್ನಾ ಜಬೀನ್ಅವರು ಗಂಡ ಹಾಗೂ ಮಕ್ಕಳೊಂದಿಗೆ ಉಡುಪಿಗೆ ತೆರಳಿ, ಅದೇ ದಿನ ಮನೆಗೆ ಹಿಂತಿರುಗಿದ್ದಾರೆ. ಬಳಿಕ ಆ. 24 ರಂದು ಬಾಕ್ಸ್ನಲ್ಲಿದ್ದ ಹಣ ತೆಗೆಯಲು ಹೋದಾಗ, ಬಾಕ್ಸ್ ಒಡೆದ ರೀತಿಯಲ್ಲಿ ಕಂಡುಬಂದಿದ್ದು, ಪರಿಶೀಲಿಸಿದಾಗ ಬಾಕ್ಸ್ನಲ್ಲಿಟ್ಟಿದ್ದ 84,800 ರೂ. ನಗದು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ತಮನ್ನಾ ಜಬೀನ್ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 101/2026, ಕಲಂ 305 BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ ಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Advertisement -








