



ಧರ್ಮಸ್ಥಳ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಎಂದು ಗುರುತಿಸಲಾಗಿದೆ. ಆರೋಪಿಯು 2025ರ ಸೆಪ್ಟೆಂಬರ್-ನವೆಂಬರ್ ಅವಧಿಯಲ್ಲಿ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಯಾರಿಗೂ ತಿಳಿಸದಂತೆ ಬೆದರಿಕೆ ಒಡ್ಡಿದ್ದು, ಬಳಿಕ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಕುರಿತು ಆ.23 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 60/2026, ಕಲಂ 64(2)(m), 65(1), 351(2) BNS ಹಾಗೂ ಕಲಂ 4(2), 6 ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಧರ್ಮಸ್ಥಳ ಠಾಣಾ ಪಿಎಸ್ಐ ಸಮರ್ಥ್ ಆರ್. ಗಾಣಿಗೇರ ನೇತೃತ್ವದ ತಂಡವು ಹೆಡ್ ಕಾನ್ಸ್ಟೇಬಲ್ಗಳಾದ ವೃಷಭ (HC 418), ಮಹೇಶ್ (HC 369) ಮತ್ತು ಸಿಪಿಸಿ ಚರಣ್ ರಾಜ್ (975) ಅವರೊಂದಿಗೆ ಆ. 25 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.








