- Advertisement -
- Advertisement -




ಬೆಂಗಳೂರು: ಸೈಬರ್ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಭೋಪಾಲ್ನಿಂದ ಇಂದೋರ್ಗೆ ತೆರಳುತ್ತಿದ್ದ ವೇಳೆ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್ಪೆಕ್ಟರ್ ರವಿ ಕೆ.ಬಿ. ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ರವಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








