Saturday, August 29, 2026
spot_imgspot_img
spot_imgspot_img

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ಸುಮಾರು 8 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ವಾರೆಂಟ್ ಆರೋಪಿಯನ್ನು ಮಂಗಳೂರು ಪೂರ್ವ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಧಿತ ಆರೋಪಿಯನ್ನು ಮುವಾಚ್ (45), ಮೊಹಮ್ಮದ್ ಬಾವಾ ಉಸ್ತಾದ್ ಅವರ ಪುತ್ರ, ಹಿಲೇರಿ ನಗರ, ಮುಕ್ಕಚೇರಿ, ಉಳ್ಳಾಲ, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಪ್ರಸ್ತುತ ಅವರು ಕೇರಳ ರಾಜ್ಯದ ಇರಿಕ್ಕೂರು, ಪೆರುವಳತ್ ಪರಂಬು ಎಂಬಲ್ಲಿ ವಾಸವಾಗಿದ್ದರು.ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಮೊ.ನಂ.166/2006, ಕಲಂ 379 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಎಲ್‌ಪಿಸಿ ವಾರೆಂಟ್ ಹೊರಡಿಸಿತ್ತು.ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಆಗಸ್ಟ್ 28, 2026ರಂದು ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Related news

error: Content is protected !!