Saturday, August 29, 2026
spot_imgspot_img
spot_imgspot_img

ಮುಂದಿನ ಪ್ರಧಾನಿಯಾರಾಗಬೇಕು? -ಸಮೀಕ್ಷೆಯಲ್ಲಿ ಟಾಪ್-3ನಲ್ಲಿ ತಮಿಳುನಾಡು ಸಿಎಂ ವಿಜಯ್

- Advertisement -
- Advertisement -


ಹೊಸದಿಲ್ಲಿ: ಭಾರತದ ಮುಂದಿನ ಪ್ರಧಾನಿಯಾಗಿ ಯಾರನ್ನು ನೋಡಲು ಜನರು ಬಯಸುತ್ತಾರೆ ಎಂಬುದರ ಕುರಿತು ನಡೆದ ಸಮೀಕ್ಷೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಟಾಪ್-3 ಸ್ಥಾನ ಪಡೆದಿದ್ದಾರೆ.
ಇಂಡಿಯಾ ಟುಡೇ ನಡೆಸಿದ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯ ಪ್ರಕಾರ, ಮುಂದಿನ ಪ್ರಧಾನಿ ಯಾರಾಗಬೇಕು ಎಂಬ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶೇ.48.7ರಷ್ಟು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೇ.27.1ರಷ್ಟು ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಶೇ.9.2ರಷ್ಟು ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಶೇ.2ರಷ್ಟು ಮಂದಿ ಮಾತ್ರ ಮುಂದಿನ ಪ್ರಧಾನಿಯಾಗಿ ಬೆಂಬಲ ಸೂಚಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.
ಸಮೀಕ್ಷೆಯ ಫಲಿತಾಂಶದಲ್ಲಿ ವಿಜಯ್ ಅವರ ಹೆಸರು ಅಗ್ರ ಮೂವರಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

- Advertisement -

Related news

error: Content is protected !!