Saturday, August 29, 2026
spot_imgspot_img
spot_imgspot_img

ಕಾಸರಗೋಡು: ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಲಾರಿ; ಚಾಲಕ ಸಾವು

- Advertisement -
- Advertisement -

ಕಾಸರಗೋಡು: ಲಾರಿಯೊಂದು ಮನೆಯ ಮೇಲೆ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮಡಿಕೈ ಕಂಣಿರಪೊಯಿಲ್ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಚಾಯ್ಯೋಂ ನಿವಾಸಿ ಸಾದಿಕ್ (40) ಎಂದು ಗುರುತಿಸಲಾಗಿದ್ದು, ಕಂಣಿರಪೊಯಿಲ್ ಕುಳಂಗಾಟ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.

ಕೆಂಪು ಕಲ್ಲು ಹೇರಿಕೊಂಡು ಬಂದ ಲಾರಿ ಕಲ್ಲನ್ನು ಅನ್ ಲೋಡ್ ಮಾಡಿದ ಬಳಿಕ ಮುಂದಕ್ಕೆ ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದಿದೆ.

ಅಪಘಾತದ ತೀವ್ರತೆಗೆ ಮನೆಯ ಅಡುಗೆ ಕೋಣೆ ಸಂಪೂರ್ಣವಾಗಿ ಧ್ವಂಸಗೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಸಾದಿಕ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!