
ಅಳಿಕೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆಯ ವಾಣಿವಿಹಾರದಲ್ಲಿ ನಡೆಯಿತು.ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರವೀಶ್ ಕೆ. ಅವರು ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ಸುರೇಶ್ ಗೌಡ, ಅಳಿಕೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಅಳಿಕೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರೂಪೇಶ್ ರೈ ಅಳಿಕೆಗುತ್ತು, ಮಾಜಿ ಅಧ್ಯಕ್ಷ ಕಾನ ಈಶ್ವರ ಭಟ್, ಅಳಿಕೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಈಶ್ವರ್ ನಾಯ್ಕ್, ಜನಜಾಗೃತಿ ವೇದಿಕೆ ಅಧ್ಯಕ್ಷ ಬಾಲಕೃಷ್ಣ ಕಾರಂತ ಹಾಗೂ ಸಾಯಿ ಗೀತ ಚಂದಾಡಿ ಉಪಸ್ಥಿತರಿದ್ದರು.ಈ ಸಾಲಿನ ನೂತನ ಅಧ್ಯಕ್ಷರಾಗಿ ಪ್ರವೀಣ್ ಪೂಜಾರಿ ಸಣ್ಣಗುತ್ತು ಅಧಿಕಾರ ಸ್ವೀಕರಿಸಿದರು.
ಕಾರ್ಯದರ್ಶಿಯಾಗಿ ವಸಂತಿ ಆಚಾರ್ಯ ಆಂಗ್ರಿ, ಜೊತೆ ಕಾರ್ಯದರ್ಶಿಯಾಗಿ ಗಿರೀಶ್ ಮಡಿಯಲ, ಉಪಾಧ್ಯಕ್ಷರಾಗಿ ಶಿವಪ್ಪ ನಾಯ್ಕ್ ಹಾಗೂ ಕೋಶಾಧಿಕಾರಿಯಾಗಿ ಸೌಮ್ಯಲತಾ ಜವಾಬ್ದಾರಿ ವಹಿಸಿಕೊಂಡರು.ಒಕ್ಕೂಟದ ಮೇಲ್ವಿಚಾರಕಿ ಮೀನಾಕ್ಷಿ ಸ್ವಾಗತಿಸಿದರು. ಸದಾಶಿವ ಶೆಟ್ಟಿ ಮಡಿಯಲ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಸೇವಾ ಪ್ರತಿನಿಧಿ ಚಂದ್ರಾವತಿ ವರದಿವಾಚನ ಮಾಡಿದರು. ಮಹೇಶ್ ದೂಜಮೂಲೆ ಧನ್ಯವಾದ ಸಮರ್ಪಿಸಿದರು.








