Tuesday, September 1, 2026
spot_imgspot_img
spot_imgspot_img

ಧಾರವಾಡ: ಡಿವೈಡರ್‌ಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಧಾರವಾಡ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಸಂಭವಿಸಿದೆ.

ದಾವಣಗೆರೆ ಮೂಲದ ವಿನಾಯಕ್(25), ಮಂಜುನಾಥ್(29) ಹಾಗೂ ಬಸವರಾಜ(34) ಎಂಬುವವರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಅಭಿಷೇಕ, ಅಜಯ್ ಹಾಗೂ ಬಸನಗೌಡ ಎಂಬ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಬಳಿಯ ದಾಬಾದಲ್ಲಿ ಊಟ ಮುಗಿಸಿ ಧಾರವಾಡ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರು ಬೆಳಗಾವಿ ಕಡೆಯಿಂದ ದಾವಣಗೆರೆಯತ್ತ ಹೊರಟಿತ್ತು ಎಂದು ಹೇಳಲಾಗಿದೆ. ಮೂವರ ಮೃತದೇಹಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು,, ಗಾಯಗೊಂಡವರನ್ನೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಪ್ರವೀಣ ಗಂಗೋಳ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!