Tuesday, September 1, 2026
spot_imgspot_img
spot_imgspot_img

ಯತೀಶ್ ಪೆರುವಾಯಿ ವಿರುದ್ಧ ಗಡಿಪಾರು ಪ್ರಸ್ತಾವನೆ ಕ್ರಮ ಕೈಬಿಟ್ಟ ಪೊಲೀಸ್ ಇಲಾಖೆ

- Advertisement -
- Advertisement -

ಮಂಗಳೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ), 55(ಬಿ) ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವಂತೆ ವಿಟ್ಲ ಪೊಲೀಸ್ ಠಾಣಾಧಿಕಾರಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸದ್ಯಕ್ಕೆ ಕೈಬಿಟ್ಟು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಐಪಿಎಸ್ ಆದೇಶ ಹೊರಡಿಸಿದ್ದಾರೆ.


ಯತೀಶ್ ಪೆರುವಾಯಿ ವಿರುದ್ಧ ಕೆಲವು ತಿಂಗಳ ಹಿಂದೆ ಗಡಿಪಾರು ಶೋಕಾಸ್ ನೋಟೀಸ್ ಜಾರಿಯಾಗಿದ್ದು, ಈ ಸಂಬಂಧ 2026ರ ಜುಲೈ 15ರಂದು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರ ನ್ಯಾಯಾಲಯದಲ್ಲಿ ವಿಚಾರಣೆ ನಿಗದಿಯಾಗಿತ್ತು. ಈ ಸಂದರ್ಭದಲ್ಲಿ ಯತೀಶ್ ಪೆರುವಾಯಿ ಅವರು ಸ್ವತಃ ನ್ಯಾಯಾಲಯಕ್ಕೆ ಹಾಜರಾಗಿ,ಯಾವುದೇ ವಕೀಲರನ್ನು ನೇಮಿಸಿಕೊಳ್ಳದೆ (Party-in-Person) ಆಗಿ ತಮ್ಮ ಪರವಾಗಿ ತಾವೇ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಅನುಮತಿ ಕೋರಿ ಮನವಿ ಸಲ್ಲಿಸಿದ್ದರು.ಸದರಿ ಮನವಿಯನ್ನು ಪರಿಗಣಿಸಿದ ಮಾನ್ಯ ನ್ಯಾಯಾಲಯವು, ಅವರಿಗೆ Party-in-Person ಆಗಿ ತಮ್ಮ ಪರವಾಗಿ ಪ್ರಕರಣವನ್ನು ನಡೆಸಲು ಹಾಗೂ ವಾದ ಮಂಡಿಸಲು ಅನುಮತಿ ನೀಡಿತ್ತು.


ನಂತರ ನಡೆದ ವಿಚಾರಣೆಯಲ್ಲಿ ಪೊಲೀಸರು ಸಲ್ಲಿಸಿದ್ದ ಗಡಿಪಾರು ಪ್ರಸ್ತಾವನೆ ಹಾಗೂ ಯತೀಶ್ ಪೆರುವಾಯಿ ಪರ ಸಲ್ಲಿಸಲಾಗಿದ್ದ ಆಕ್ಷೇಪಣೆಗಳನ್ನು ಪರಿಶೀಲಿಸಲಾಯಿತು.
ವಿಚಾರಣೆಯಲ್ಲಿ ಯತೀಶ್ ಅವರು ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ) ಅಡಿಯಲ್ಲಿ ಕ್ರಮ ಕೈಗೊಳ್ಳಲು ಅರ್ಹ ವ್ಯಕ್ತಿಯಾಗಿರುವುದು ಕಂಡುಬಂದಿದೆ. ಆದರೆ, ಕಳೆದ ಒಂದು ವರ್ಷದಿಂದ ಅವರು ಯಾವುದೇ ಅನಧಿಕೃತ ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.


ಅಲ್ಲದೆ, ಕಳೆದ ಒಂದು ವರ್ಷದಲ್ಲಿ ಕಲಂ 55(ಎ)ಗೆ ಸಂಬಂಧಿಸಿದಂತೆ ತುರ್ತು ಎಚ್ಚರಿಕೆ ಅಥವಾ ಅಲಾರಂ ಉಂಟಾಗುವ ರೀತಿಯ ಯಾವುದೇ ಚಟುವಟಿಕೆಯಲ್ಲಿ ಅವರು ತೊಡಗಿರುವುದು ಕಂಡುಬಂದಿಲ್ಲ ಎಂದು ಅಧಿಕಾರಿಗಳು ದಾಖಲಿಸಿದ್ದಾರೆ.


ಯತೀಶ್ ಪೆರುವಾಯಿ ಅವರು ಮುಂದಿನ ದಿನಗಳಲ್ಲಿ ಯಾವುದೇ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದರೆ, ಅವರ ವಿರುದ್ಧ ಹೊಸದಾಗಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸ್ವಾತಂತ್ರ್ಯವಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಅವರ ಉತ್ತಮ ನಡವಳಿಕೆಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಹಂತದಲ್ಲಿ ಗಡಿಪಾರು ಪ್ರಕ್ರಿಯೆಯನ್ನು ಕೈಬಿಡಲಾಗಿದೆ.


ಈ ಕುರಿತು 2026ರ ಆಗಸ್ಟ್ 26ರಂದು ತೆರೆದ ನ್ಯಾಯಾಲಯದಲ್ಲಿ ಆದೇಶವನ್ನು ಪ್ರಕಟಿಸಲಾಗಿದೆ. ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಐಪಿಎಸ್ ಅವರು ಈ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!