Wednesday, September 2, 2026
spot_imgspot_img
spot_imgspot_img

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು, ಸೆ.2: ಪುತ್ತೂರು ಕಸಬ ಗ್ರಾಮದ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.1ರಂದು ಮಧ್ಯಾಹ್ನ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ, ಕೆಲವರು ಪರಸ್ಪರ ಕೈಕೈ ಮಿಲಾಯಿಸಿಕೊಂಡು ಗಲಾಟೆ ನಡೆಸುತ್ತಾ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ.

ಪೊಲೀಸ್ ನಿರೀಕ್ಷಕರು ಗಲಾಟೆ ನಡೆಸುತ್ತಿದ್ದವರಿಗೆ ತಿಳುವಳಿಕೆ ನೀಡಿ ಶಾಂತಿ ಕಾಪಾಡುವಂತೆ ಸೂಚಿಸಿದರೂ, ಅವರು ಕಲಹ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ ಪ್ರವೀಣ್ ಆಚಾರ್ಯ, ಕೂರ್ನಡ್ಕದ ರವೂಫ್ ಹಾಗೂ ಬೋಳ್ವಾರದ ಹಕೀಂ ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 104/2026, ಕಲಂ 194(2) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!