Wednesday, September 2, 2026
spot_imgspot_img
spot_imgspot_img

ಜೋರ್ಡಾನ್‌, ಬಹ್ರೇನ್‌ನಲ್ಲಿರೋ ಯುಎಸ್‌ ನೆಲೆಗಳ ಮೇಲೆ ಕ್ಷಿಪಣಿ ದಾಳಿ

- Advertisement -
- Advertisement -

ಟೆಹ್ರಾನ್‌: ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೆಲೆಗಳ ಮೇಲೆ ಅಮೆರಿಕ ಸೇನೆ ನಡೆಸಿದ ದಾಳಿಗೆ ಈಗ ಇರಾನ್‌ ಕೂಡ ಪ್ರತೀಕಾರ ತೀರಿಸಿಕೊಳ್ಳಲು ಆರಂಭಿಸಿದೆ. ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್‌ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯದಾದ್ಯಂತ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ.

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳು ಹಾಗೂ ಮಧ್ಯಪ್ರಾಚ್ಯದಲ್ಲಿ ನಿಯೋಜನೆಗೊಂಡಿರುವ ಅಮೆರಿಕ ಸೈನಿಕರ ಮೇಲೆ ದಾಳಿಗೆ ಯತ್ನಿಸಿದ್ದಕ್ಕೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್(ಐಆರ್‌ಜಿಸಿ) ನೆಲೆಗಳ ಮೇಲೆ ಅಮೆರಿಕ ಸೇನೆ ದಾಳಿ ಆರಂಭಿಸಿತ್ತು. ಇದಕ್ಕೆ ಇರಾನ್‌ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದೆ.

ಜೋರ್ಡಾನ್‌ನಲ್ಲಿರುವ ಅಮೆರಿಕ ಮಿಲಿಟರಿ ನೆಲೆಗಳ ಮೇಲೆ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ ನಡೆಸಿದ್ದಲ್ಲದೇ, ಬಹ್ರೇನ್‌ನಲ್ಲಿರುವ ಮಿಲಿಟರಿ ನೆಲೆಯ ಮೇಲೆ ಬೃಹತ್‌ ಪ್ರಮಾಣದ ಡ್ರೋನ್‌ ದಾಳಿ ನಡೆಸಿದೆ. ಆದರೆ, ತನ್ನ ವಾಯುಪ್ರದೇಶ ಪ್ರವೇಶಿಸಿದ 13 ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ 10 ಅನ್ನು ನಮ್ಮ ವಾಯು ರಕ್ಷಣಾ ವ್ಯವಸ್ಥೆಗಳು ತಡೆಹಿಡಿದಿವೆ. ಇನ್ನುಳಿದ ಮೂರು ಕ್ಷಿಪಣಿಗಳು ಜನನಿಬಿಡ ಪ್ರದೇಶಗಳಿಂದ ದೂರ ಬಿದ್ದಿವೆ ಎಂದು ಜೋರ್ಡಾನ್‌ ಹೇಳಿಕೊಂಡಿದೆ.

ಕುವೈತ್‌ ಕೂಡ ಇರಾನ್‌ನ ಪ್ರತೀಕಾರದ ಕಾರ್ಯಾಚರಣೆಯ ನಂತರ ತನ್ನ ವಾಯು ರಕ್ಷಣಾ ವ್ಯವಸ್ಥೆಗಳು ಪ್ರತಿಕೂಲ ಡ್ರೋನ್ ದಾಳಿಗಳಿಗೆ ಪ್ರತಿಕ್ರಿಯಿಸುತ್ತಿವೆ ಎಂದು ಹೇಳಿದೆ.

ಐಆರ್‌ಜಿಸಿ ನೆಲೆಗಳ ಮೇಲಿನ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವುದಾಗಿ ಹೇಳಿಕೊಂಡಿರುವ ಇರಾನ್‌, ಅಮರಿಕಕ್ಕೆ ತಿರುಗೇಟು ನೀಡಿದ್ದು, ಅಮೆರಿಕವು ನಮ್ಮ ನಾಗರಿಕ ಪ್ರದೇಶಗಳು ಸೇರಿದಂತೆ ಹಲವಾರು ಸ್ಥಳಗಳ ಮೇಲೆ ಹತಾಶಾ ದಾಳಿ ನಡೆಸಿದೆ. ಇದರೊಂದಿಗೆ ಹಾರ್ಮುಜ್‌ ಜಲಸಂಧಿ ಬಳಿ ವಿದೇಶಿ ಪಡೆಗಳನ್ನ ಎದಿರುವ ಕಾರ್ಯಾಚರಣೆಯನ್ನ ಐಆರ್‌ಜಿಸಿ ಮತ್ತಷ್ಟು ಬಿಗಿಗೊಳಿಸಿದೆ ಎಂದು ಹೇಳಿದೆ.

ಇನ್ನೊಂದು ಹೇಳಿಕೆಯಲ್ಲಿ, ಜೋರ್ಡಾನ್‌ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಐಆರ್‌ಜಿಸಿ ನಡೆಸಿದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಅಮೆರಿಕ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಬಹ್ರೇನ್‌ನಲ್ಲಿರುವ ಯುಎಸ್ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡು ದೊಡ್ಡ ಪ್ರಮಾಣದ ಡ್ರೋನ್ ದಾಳಿ ನಡೆದಿದೆ ಎಂಬುದಾಗಿಯೂ ಹೇಳಿಕೊಂಡಿದೆ. ಆದರೆ ಈ ಹೇಳಿಕೆಗೆ ಅಮೆರಿಕದ ಅಧಿಕಾರಿಗಳಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿಕೊಂಡಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!