Thursday, June 25, 2026
spot_imgspot_img
spot_imgspot_img

ಕಾಂಗ್ರೆಸ್​ ನಾಯಕ ದಿನೇಶ್ ಗುಂಡೂರಾವ್ ರವರಿಗೆ ಮಾತೃ ವಿಯೋಗ!

- Advertisement -
- Advertisement -

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಆರ್​. ಗುಂಡೂರಾವ್ ರವರ ಹೆಂಡತಿ ಹಾಗೂ ಕಾಂಗ್ರೆಸ್​ ನಾಯಕ ದಿನೇಶ್ ಗುಂಡೂರಾವ್ ರವರ ತಾಯಿ ವರಲಕ್ಷ್ಮೀ ಗುಂಡೂರಾವ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವರಲಕ್ಷ್ಮೀ ಗುಂಡೂರಾವ್ ಗುಣಮುಖರಾಗಿದ್ದರು. ಬಳಿಕ ಪುನಃ ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 72 ವರ್ಷದ ವರಲಕ್ಷ್ಮೀ ರವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಇಂದು ದೇವನಹಳ್ಳಿಯಲ್ಲಿರುವ ಫಾರ್ಮ್​ ಹೌಸ್​ನಲ್ಲಿ ವರಲಕ್ಷ್ಮೀ ಗುಂಡೂರಾವ್ ಅವರ ಅಂತ್ಯಕ್ರಿಯೆ ನೆರವೇರಲಿದೆ.

- Advertisement -

Related news

error: Content is protected !!