- Advertisement -
- Advertisement -





ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಟೋ – ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಶರಣಮ್ಮ(30) ಎಂಬ ಮಹಿಳೆ ಮತ್ತು ಆಕೆಯ 3 ತಿಂಗಳ ಮಗು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ವಾಡಿ ಪಟ್ಟಣಕ್ಕೆ ಆಗಮಿಸುವ ವೇಳೆ ಆಟೋಗೆ ಲಾರಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿ, ಅತ್ತೆ ಸಾಬಮ್ಮ, ಆಟೋ ಚಾಲಕ ಖಾಜಾ ಪಟೇಲ್ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
- Advertisement -








