Friday, September 4, 2026
spot_imgspot_img
spot_imgspot_img

ದುನಿಯಾ-ವಿಜಯ್–ನಾಗರತ್ನ ವಿಚ್ಛೇದನ: ₹2 ಕೋಟಿ ಜೀವನಾಂಶಕ್ಕೆ ಹೈಕೋರ್ಟ್ ಆದೇಶ

- Advertisement -
- Advertisement -

ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ಅವರ ಮೊದಲ ಪತ್ನಿ ನಾಗರತ್ನ ನಡುವಿನ ವಿಚ್ಛೇದನಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ವಿಜಯ್ ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್. ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠ, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ ವಿಚ್ಛೇದನ ಮಂಜೂರು ಮಾಡಿದೆ.

ನಾಗರತ್ನ ಅವರಿಗೆ ಮೂರು ತಿಂಗಳೊಳಗೆ ₹2 ಕೋಟಿ ಜೀವನಾಂಶ ಪಾವತಿಸುವಂತೆ ವಿಜಯ್ ಅವರಿಗೆ ನ್ಯಾಯಾಲಯ ಸೂಚಿಸಿದೆ. ಪ್ರಕರಣದ ವಿಸ್ತೃತ ತೀರ್ಪು ಇನ್ನಷ್ಟೇ ಲಭ್ಯವಾಗಬೇಕಿದೆ.

ತೀರ್ಪಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ದುನಿಯಾ ವಿಜಯ್, “ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ನ್ಯಾಯಾಲಯದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದೇನೆ. ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಈ ವಿಚಾರದ ಕುರಿತು ಮಾಧ್ಯಮಗಳ ಮುಂದೆ ಮಾತನಾಡಲು ಇಚ್ಛಿಸುವುದಿಲ್ಲ ಎಂದೂ ಹೇಳಿದ್ದಾರೆ.

- Advertisement -

Related news

error: Content is protected !!