- Advertisement -
- Advertisement -





ಬಂಟ್ವಾಳ: ಕರ್ತವ್ಯದಲ್ಲಿ ಲೋಪ, ನಿರ್ಲಕ್ಷ್ಯ ಹಾಗೂ ಮೇಲಾಧಿಕಾರಿಯೊಂದಿಗೆ ಉದ್ದಟತನದ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್ ಅರುಣ್ ಚೌಹಾನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಕರ್ತವ್ಯ ನಿರ್ವಹಣೆಯಲ್ಲಿ ಅಗತ್ಯ ಎಚ್ಚರಿಕೆ ಹಾಗೂ ಜವಾಬ್ದಾರಿಯನ್ನು ವಹಿಸದಿರುವುದು, ಕರ್ತವ್ಯದ ವೇಳೆ ನಿರ್ಲಕ್ಷ್ಯ ತೋರಿರುವುದು ಹಾಗೂ ಮೇಲಾಧಿಕಾರಿಯೊಂದಿಗೆ ಶಿಸ್ತು ಬದ್ಧವಲ್ಲದ ರೀತಿಯಲ್ಲಿ ವರ್ತಿಸಿರುವ ಆರೋಪಗಳ ಹಿನ್ನೆಲೆಯಲ್ಲಿ ಇಲಾಖಾ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಅಮಾನತು ಆದೇಶದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ನಿಯಮಾನುಸಾರ ಮುಂದಿನ ಕ್ರಮ ಹಾಗೂ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಆರೋಪಗಳು ಇಲಾಖಾ ವಿಚಾರಣೆಯಲ್ಲಿ ಸಾಬೀತಾಗುವವರೆಗೆ ಅವುಗಳನ್ನು ಆರೋಪಗಳೆಂದೇ ಪರಿಗಣಿಸಬೇಕಾಗಿದೆ.
- Advertisement -








