Saturday, September 5, 2026
spot_imgspot_img
spot_imgspot_img

ಪುತ್ತೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ; ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು: ಕೌಟುಂಬಿಕ ಕಲಹದ ದೂರು ವಿಚಾರಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪಡ್ನೂರು ಗ್ರಾಮದ ಮುಂಡಾಜೆಯಲ್ಲಿ ನಡೆದಿದೆ.

ದಿನಾಂಕ 04.09.2026 ರಂದು ರಾತ್ರಿ ಹೊಯ್ಸಳ ವಾಹನದಲ್ಲಿ ಗಸ್ತಿನಲ್ಲಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಹೆಚ್.ಸಿ ಮಧು ಹಾಗೂ ಸಿಪಿಸಿ ಭೀಮನ ಗೌಡ ಎಂ. ಬಿರಾದರ್ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ಅವರು ಪಡ್ನೂರು ಗ್ರಾಮದ ಮುಂಡಾಜೆ ಎಂಬಲ್ಲಿಗೆ ತೆರಳಿದ್ದರು.

ಸ್ಥಳಕ್ಕೆ ತೆರಳಿದಾಗ ಮಹಿಳೆಯೊಬ್ಬರು ತಮ್ಮ ಪತಿ ಹಲ್ಲೆ ನಡೆಸಿರುವುದಾಗಿ ದೂರಿದ್ದರು. ಈ ಬಗ್ಗೆ ಪೊಲೀಸರು ನವೀನ್ ಎಂಬಾತನನ್ನು ವಿಚಾರಿಸಿದಾಗ ಆತ ಕೋಪಗೊಂಡು ಪುನಃ ಪತ್ನಿ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಇದನ್ನು ತಡೆಯಲು ಮುಂದಾದ ಪೊಲೀಸ್ ಸಿಬ್ಬಂದಿಗಳಿಗೆ ನವೀನ್, ಆತನ ತಾಯಿ ಮತ್ತು ಸಹೋದರ ಸೇರಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 107/2026, ಕಲಂ 352, 132, 121(1) ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಆರೋಪಿ ನವೀನ್ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಡುಗಡೆಯಾದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!