- Advertisement -
- Advertisement -
ಪುತ್ತೂರು: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತಗೊಂಡು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸೆ.5ರಂದು ಸಂಜೆ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಅವರ ಪುತ್ರ, ನೆಹರು ನಗರದ ಖಾಸಗಿ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿ ಶ್ರಮಿಕ್ (20) ಎಂದು ಗುರುತಿಸಲಾಗಿದೆ.ಬೊಳುವಾರಿನ ಜಿಮ್ ಸೆಂಟರ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಶ್ರಮಿಕ್ ಅವರಿಗೆ ಏಕಾಏಕಿ ಉಸಿರುಕಟ್ಟಿದಂತಾಗಿದೆ.
ತಕ್ಷಣ ಅವರನ್ನು ಬೊಳುವಾರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಶ್ರಮಿಕ್ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ
- Advertisement -








