Sunday, September 6, 2026
spot_imgspot_img
spot_imgspot_img

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರು

- Advertisement -
- Advertisement -

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಕಾರೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಮಂಡ್ಯ ಹೊರವಲಯದ ಇಂಡುವಾಳು ಬಳಿ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೈಸೂರಿನ ಸ್ಕನದ್ ಎಂಬುವರಿಗೆ ಸೇರಿದ ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಬಟ್ಟೆ ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಇಬ್ಬರು ಕಾರಿನಿಂದ ಕೆಳಗಿಳಿದಿದ್ದು, ಕ್ಷಣಾರ್ಧದಲ್ಲಿ ಇಡೀ ಕಾರು ಅಗ್ನಿಜ್ವಾಲೆಗೆ ಆಹುತಿಯಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರಾದರೂ, ಅಷ್ಟರಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!