Monday, September 7, 2026
spot_imgspot_img
spot_imgspot_img

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಸಾವು

- Advertisement -
- Advertisement -

ಭೋಪಾಲ್‌: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಜನ ಸಾವನ್ನಪ್ಪಿದ್ದಾರೆ.

ಶನಿವಾರ‌ (ಸೆ.5) ರಾತ್ರಿ ಘೂಘರ್, ನೌರಾಜ್, ಬರಾಜ್ ಸುತ್ತಮುತ್ತಲಿನ ಪ್ರದೇಶಗಳ ಜನರು ವಿಷಪೂರಿತ ಮದ್ಯ ಸೇವಿಸಿ ಅಸ್ವಸ್ಥರಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

9 ಮಂದಿ ಸಾವಿಗೆ ವಿಷಪೂರಿತ ಮದ್ಯ ಕಾರಣವೆಂದು ಶಂಕಿಸಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ಮರಣೋತ್ತರ ಪರೀಕ್ಷೆಗಳ ನಂತರ ನಿಖರವಾದ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಿಂದಾಗಿ ನಕಲಿ ಮದ್ಯ ತಯಾರಿಕೆ ಮತ್ತು ಸೇವನೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಕೆಲವರಿಗೆ ಚಿಕಿತ್ಸೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

ಕಳೆದ ತಿಂಗಳು, ಗುಜರಾತ್‌ನ ಭಾವನಗರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 13 ಜನರು ಸಾವನ್ನಪ್ಪಿದ್ದರು. 12ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಶಂಕಿತ ಅಕ್ರಮ ಮದ್ಯ ಮಾರಾಟಗಾರರನ್ನು ಬಂಧಿಸಲಾಗಿದೆ.

ತನಿಖೆಯಲ್ಲಿ ಮದ್ಯದಲ್ಲಿ 38.59% ಮೆಥನಾಲ್ ಇರುವುದು ಕಂಡುಬಂದಿತ್ತು. ಗುಜರಾತ್ ಮದ್ಯ ನಿಷೇಧಿತ ರಾಜ್ಯವಾಗಿದ್ದು, ಅಲ್ಲಿ ಮದ್ಯ ತಯಾರಿಕೆ, ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!